SSLC ತೃತೀಯ ಭಾಷೆ ಅಂಕ ತೀವ್ರ ವಿವಾದ: CM ಜೊತೆ ಚರ್ಚೆಗೆ ಮುಂದಾದ ಸಚಿವ ಬಂಗಾರಪ್ಪ .

ಕರ್ನಾಟಕದಲ್ಲಿ SSLC ವಿದ್ಯಾರ್ಥಿಗಳು ಹಾಗೂ ಪೋಷಕರ ಗಮನ ಸೆಳೆದಿರುವ ತೃತೀಯ ಭಾಷೆ ಅಂಕ ವಿವಾದ (SSLC Third Language grade issue)ಇದೀಗ ಮತ್ತಷ್ಟು ಗಂಭೀರ ಹಂತ ತಲುಪಿದೆ. ಹೈಕೋರ್ಟ್ ನೀಡಿದ ಮಹತ್ವದ ನಿರ್ದೇಶನದ ನಂತರ ಸರ್ಕಾರದ ಮುಂದಿನ ನಡೆ ಏನಾಗಲಿದೆ ಎಂಬುದರ ಬಗ್ಗೆ ಎಲ್ಲರಲ್ಲೂ ಕುತೂಹಲ ಹೆಚ್ಚಾಗಿದೆ.

ಈ ಹಿನ್ನೆಲೆಯಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ ಮುಂದಿನ ಕಾನೂನು ಕ್ರಮಗಳ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದಾರೆ.

ವಿದ್ಯಾರ್ಥಿಗಳು ಆತಂಕಪಡಬಾರದು, ಫಲಿತಾಂಶ ಪ್ರಕಟಣೆಯಲ್ಲಿ ಯಾವುದೇ ವಿಳಂಬವಾಗುವುದಿಲ್ಲ ಎಂದು ಸಚಿವರು ಭರವಸೆ ನೀಡಿರುವುದು ವಿದ್ಯಾರ್ಥಿಗಳಿಗೆ ಸ್ವಲ್ಪ ಮಟ್ಟಿನ ನೆಮ್ಮದಿ ತಂದಿದೆ.

ಹೈಕೋರ್ಟ್‌ನ ಮಹತ್ವದ ನಿರ್ದೇಶನ – ಗ್ರೇಡ್ ಬದಲು ಅಂಕ ನೀಡಬೇಕು

ಈ ವಿವಾದಕ್ಕೆ ಮುಖ್ಯ ಕಾರಣವಾಗಿದ್ದು ಕರ್ನಾಟಕ ಹೈಕೋರ್ಟ್ ನೀಡಿದ ಮಹತ್ವದ ನಿರ್ದೇಶನ.

ಮಂಗಳವಾರ ನೀಡಿದ ಆದೇಶದಲ್ಲಿ, SSLC ಪರೀಕ್ಷೆಯ ತೃತೀಯ ಭಾಷಾ ವಿಷಯಕ್ಕೆ ಗ್ರೇಡ್ ಬದಲು ನೇರವಾಗಿ ಅಂಕಗಳನ್ನು ನೀಡಬೇಕು ಎಂದು ಹೈಕೋರ್ಟ್ ಸೂಚಿಸಿದೆ.

ಈ ತೀರ್ಪು ಹೊರಬಂದ ನಂತರ, ಈಗಾಗಲೇ ಜಾರಿಯಲ್ಲಿದ್ದ ಮೌಲ್ಯಮಾಪನ ವಿಧಾನವನ್ನು ಸರ್ಕಾರ ಮುಂದುವರಿಸಬಹುದೇ ಅಥವಾ ಬದಲಿಸಬೇಕೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.

ವಿಶೇಷವಾಗಿ, ಈ ಆದೇಶವು ವಿದ್ಯಾರ್ಥಿಗಳ ಫಲಿತಾಂಶಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದರ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.

ಇದನ್ನು ಓದಿ : PUC ಉಚಿತ ಪಠ್ಯಪುಸ್ತಕ 2026: PUC ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆ ಆರಂಭ.

ಸಿಎಂ ಜೊತೆ ಚರ್ಚೆಯ ಬಳಿಕ ಅಂತಿಮ ನಿರ್ಧಾರ

ಈ ಕುರಿತು ಪ್ರತಿಕ್ರಿಯೆ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಸಿ ಮುಂದಿನ ಕ್ರಮಗಳ೯ SSLC Third Language grade issue) ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಅವರು  ಮುಖ್ಯಮಂತ್ರಿ ಜೊತೆ ಸಭೆ ನಡೆಸಿ ಮತ್ತು ಹೈಕೋರ್ಟ್ ಆದೇಶದ ಪರಿಣಾಮಗಳನ್ನು ಪರಿಶೀಲಿಸಿ ಮೇಲ್ಮನವಿ ಸಲ್ಲಿಸುವ ಅಗತ್ಯವಿದೆಯೇ ಎಂಬುದನ್ನು ನೋಡಲಾಗುತ್ತದೆ. ವಿದ್ಯಾರ್ಥಿಗಳ ಹಿತಾಸಕ್ತಿಗೆ ಅನುಗುಣವಾಗಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂಬ ಮಾಹಿತಿ ನೀಡಿದ್ದಾರೆ. ಈ ಸಭೆಯ ಬಳಿಕ ಸರ್ಕಾರದ ಮುಂದಿನ ನಡೆ ಸ್ಪಷ್ಟವಾಗುವ ಸಾಧ್ಯತೆ ಇದೆ.

ವಿದ್ಯಾರ್ಥಿಗಳಿಗೆ ಸಚಿವರಿಂದ ಭರವಸೆ

ಈ ವಿವಾದದ ಹಿನ್ನೆಲೆಯಲ್ಲಿ ಹಲವಾರು ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ.

ಇದನ್ನು ಗಮನದಲ್ಲಿಟ್ಟುಕೊಂಡು, ಸಚಿವ ಮಧು ಬಂಗಾರಪ್ಪ ಅವರು ವಿದ್ಯಾರ್ಥಿಗಳಿಗೆ ಮಹತ್ವದ ಭರವಸೆ ನೀಡಿದ್ದಾರೆ. ವಿದ್ಯಾರ್ಥಿಗಳು ಯಾವುದೇ ರೀತಿಯಲ್ಲಿ ಆತಂಕಪಡಬಾರದು, ಫಲಿತಾಂಶ ಪ್ರಕಟಣೆಯಲ್ಲಿ ವಿಳಂಬವಾಗುವುದಿಲ್ಲ ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಮೌಲ್ಯಮಾಪನ ವಿಧಾನ ಬದಲಾವಣೆ ಕುರಿತ ಕರಡು ಅಧಿಸೂಚನೆ

ಈ ವಿವಾದ ಆರಂಭವಾಗುವುದಕ್ಕೂ ಮುನ್ನ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (DSEL) ಮೌಲ್ಯಮಾಪನ ವಿಧಾನದಲ್ಲಿ ಬದಲಾವಣೆ ಮಾಡುವ ಬಗ್ಗೆ ಕರಡು ಅಧಿಸೂಚನೆ ಪ್ರಕಟಿಸಿತ್ತು.

ಈ ಕರಡು ಅಧಿಸೂಚನೆಯಂತೆ ಮೌಲ್ಯಮಾಪನ ವಿಧಾನದಲ್ಲಿ ಬದಲಾವಣೆ, ಗ್ರೇಡಿಂಗ್ ವ್ಯವಸ್ಥೆ ಕುರಿತು ಪರಿಷ್ಕರಣೆ ಮತ್ತು ಸಾರ್ವಜನಿಕ ಅಭಿಪ್ರಾಯ ಸಂಗ್ರಹಣೆ ಮಾಡುವಂತೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು.

ಈ ಕ್ರಮವೇ ನಂತರ ವಿವಾದಕ್ಕೆ ಕಾರಣವಾಗಿದ್ದು, ಹಲವು ಶಿಕ್ಷಕರು ಮತ್ತು ಶಿಕ್ಷಣ ತಜ್ಞರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯರಿಂದ ಸರ್ಕಾರಕ್ಕೆ ಪತ್ರ

ಈ ವಿವಾದಕ್ಕೆ ಸಂಬಂಧಿಸಿದಂತೆ ಕಲಬುರಗಿ ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಶಶಿಲ್ ಜಿ ನಮೋಶಿ ಅವರು ಸರ್ಕಾರಕ್ಕೆ ಮಹತ್ವದ ಪತ್ರ ಬರೆದಿದ್ದಾರೆ.

ಅವರು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಶಿಕ್ಷಣ ಇಲಾಖೆಗೆ ಈ ಕುರಿತು ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ. “ಶೈಕ್ಷಣಿಕ ವರ್ಷ ಪೂರ್ಣಗೊಂಡ ನಂತರ ಮೌಲ್ಯಮಾಪನ ವಿಧಾನ ಬದಲಿಸುವುದು ಸರಿಯಲ್ಲ, ಇದು ವಿದ್ಯಾರ್ಥಿಗಳ ನ್ಯಾಯಸಮ್ಮತ ನಿರೀಕ್ಷೆಗೆ ಧಕ್ಕೆ ಉಂಟುಮಾಡುತ್ತದೆ.ಅಂಕಗಳನ್ನು ಗ್ರೇಡ್ ಆಗಿ ಬದಲಿಸುವುದು ಹೈಕೋರ್ಟ್ ಆದೇಶಕ್ಕೆ ವಿರುದ್ಧವಾಗಿದೆ” ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

ಮೇಲ್ಮನವಿ ಸಲ್ಲಿಸುವ ಬಗ್ಗೆ ಸರ್ಕಾರದ ಚಿಂತನೆ

ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸರ್ಕಾರ ಈಗ ಮೇಲ್ಮನವಿ ಸಲ್ಲಿಸುವ ಅಗತ್ಯವಿದೆಯೇ ಎಂಬುದನ್ನೂ ಪರಿಶೀಲಿಸುತ್ತಿದೆ. ಈ ವಿಷಯದಲ್ಲಿ ಕಾನೂನು ತಜ್ಞರ ಸಲಹೆ ಪಡೆದು, ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ಮೇಲ್ಮನವಿ ಸಲ್ಲಿಸಿದರೆ ಪ್ರಕರಣ ಮತ್ತಷ್ಟು ನ್ಯಾಯಾಲಯದ ಹಂತಕ್ಕೆ ಹೋಗಬಹುದು ಮತ್ತು ಅಂತಿಮ ತೀರ್ಮಾನಕ್ಕೆ ಹೆಚ್ಚು ಸಮಯ ಹಿಡಿಯಬಹುದು.

ಆದರೆ ಸರ್ಕಾರ ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಲಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಚರ್ಚೆಗೆ ಕಾರಣವಾದ ವಿವಾದ

ಈ ತೃತೀಯ ಭಾಷೆ ಅಂಕ ವಿವಾದವು ಈಗ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಶಿಕ್ಷಕರು, ಪೋಷಕರು ಹಾಗೂ ಶಿಕ್ಷಣ ತಜ್ಞರು ಈ ಕುರಿತು ವಿಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಕೆಲವರು ಗ್ರೇಡಿಂಗ್ ವ್ಯವಸ್ಥೆ ಉತ್ತಮ ಇದರಿಂದ ವಿದ್ಯಾರ್ಥಿಗಳ ಒತ್ತಡ ಕಡಿಮೆ ಆಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಇನ್ನೂ ಕೆಲವರು ಅಂಕ ಪದ್ಧತಿ ಹೆಚ್ಚು ಸ್ಪಷ್ಟವಾಗಿದ್ದು ವಿದ್ಯಾರ್ಥಿಗಳ ಸಾಮರ್ಥ್ಯ ಸ್ಪಷ್ಟವಾಗಿ ತಿಳಿಯುತ್ತದೆ ಎಂದು ಹೇಳುತ್ತಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಸಾಧ್ಯವೇ?

ಈ ವಿವಾದ ಮುಂದುವರಿದರೆ, ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕೆಲವು ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದೆ.

ಮುಖ್ಯವಾಗಿ ಫಲಿತಾಂಶ ಪ್ರಕಟಣೆಯ ವೇಳಾಪಟ್ಟಿ, ಮುಂದಿನ ಪ್ರವೇಶ ಪ್ರಕ್ರಿಯೆಗಳಲ್ಲಿ ಬದಲಾವಣೆ ಆಗುವ ಸಾಧ್ಯತೆ ಇದೆ. ಆದರೆ ಸರ್ಕಾರ ಈಗಾಗಲೇ ವಿದ್ಯಾರ್ಥಿಗಳಿಗೆ ಭರವಸೆ ನೀಡಿರುವುದರಿಂದ, ಈ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ದೊರೆಯುವ ನಿರೀಕ್ಷೆ ಇದೆ.