AO & AAO Recruitment : KPSC ಬದಲು KEA ಮೂಲಕ ಕೃಷಿ ಅಧಿಕಾರಿ ನೇಮಕಾತಿ! 945 AO & AAO ಹುದ್ದೆಗಳ ನೇಮಕಾತಿ ಆದೇಶ

ಬೆಂಗಳೂರು: ಕರ್ನಾಟಕದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸಂಬಂಧಿಸಿದ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸುತ್ತಿದ್ದ ಕೃಷಿ ಇಲಾಖೆ ಸಂಬಂಧಿತ ಹುದ್ದೆಗಳ ನೇಮಕಾತಿಯನ್ನು ಇನ್ನು ಮುಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ನಡೆಸಲು ಸರ್ಕಾರ ಆದೇಶ ಹೊರಡಿಸಿದೆ.

ಈ ನಿರ್ಧಾರವು ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಪ್ರಮುಖ ಸುದ್ದಿಯಾಗಿದ್ದು, ವಿಶೇಷವಾಗಿ ಕೃಷಿ ಇಲಾಖೆಯ 945 ಕೃಷಿ ಅಧಿಕಾರಿ (AO) ಹಾಗೂ ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ನೇಮಕಾತಿಗೆ ಸಿದ್ಧತೆ ನಡೆಸುತ್ತಿದ್ದ ಅಭ್ಯರ್ಥಿಗಳಿಗೆ ಇದು ಬಹಳ ಮಹತ್ವದ ಬೆಳವಣಿಗೆಯಾಗಿದೆ.

ಈ ನಿರ್ಧಾರವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರ ಸೂಚನೆ ನೀಡಿದ್ದು, ಇದರಿಂದ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚುವ ನಿರೀಕ್ಷೆ ವ್ಯಕ್ತವಾಗಿದೆ.

KPSC ಪರೀಕ್ಷೆ ವಿವಾದದ

ಇತ್ತೀಚೆಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ್ದ ಕೆಲವು ಪರೀಕ್ಷೆಗಳಲ್ಲಿ ಅಕ್ರಮ ನಡೆದಿರುವುದು ಸಾಬೀತಾದ ಹಿನ್ನೆಲೆ ರಾಜ್ಯ ಸರ್ಕಾರಕ್ಕೆ ವ್ಯಾಪಕ ಟೀಕೆಗಳು ಎದುರಿಸಬೇಕಾಯಿತು. ಈ ಘಟನೆ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಲ್ಲಿ ಆಕ್ರೋಶ ಮತ್ತು ಅಸಮಾಧಾನಕ್ಕೆ ಕಾರಣವಾಯಿತು.

ಅಕ್ರಮ ಆರೋಪಗಳು ಹೊರಬಂದ ನಂತರ ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆ ಬಗ್ಗೆ ಹಲವಾರು ಪ್ರಶ್ನೆಗಳು ಎದ್ದಿದ್ದವು. ಈ ಹಿನ್ನೆಲೆಯಲ್ಲಿ ಸರ್ಕಾರ ಹೊಸ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿತ್ತು. ಇದರಿಂದಲೇ ಕೃಷಿ ಇಲಾಖೆಯ ನೇಮಕಾತಿ ಪ್ರಕ್ರಿಯೆಯನ್ನು KEA ಮೂಲಕ ನಡೆಸುವ ನಿರ್ಧಾರ ಕೈಗೊಳ್ಳಲಾಗಿದೆ.

ಇದನ್ನು ಓದಿ : GKVK Courses 2026: 7ನೇ ತರಗತಿ ಪಾಸ್‌ ಆದವರಿಗೆ ಸುವರ್ಣ ಅವಕಾಶ! ಆಧುನಿಕ ಕೃಷಿ ತರಭೆತಿ 


945 AO ಮತ್ತು AAO ಹುದ್ದೆಗಳ ನೇಮಕಾತಿಯಲ್ಲಿ ಬದಲಾವಣೆ AO & AAO Recruitment

ಕಳೆದ ವರ್ಷ ಕೃಷಿ ಇಲಾಖೆಯ ಸುಮಾರು 945 ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ನೇಮಕಾತಿಯನ್ನು KPSC ಮೂಲಕ ನಡೆಸಲು ಸರ್ಕಾರ ಆದೇಶ ಹೊರಡಿಸಿತ್ತು.

ಆದರೆ ಇದೀಗ ಈ ಆದೇಶವನ್ನು ರದ್ದುಪಡಿಸಿ, ಈ ಎಲ್ಲಾ ಹುದ್ದೆಗಳ ನೇಮಕಾತಿಯನ್ನು KEA ಮೂಲಕ ನಡೆಸಲು ಹೊಸ ಆದೇಶ ಹೊರಡಿಸಲಾಗಿದೆ.

ಈ ನಿರ್ಧಾರದಿಂದ ನೇಮಕಾತಿ ಪ್ರಕ್ರಿಯೆ ವೇಗವಾಗಿ ನಡೆಯುವ ಸಾಧ್ಯತೆ ಇದ್ದು, ಪಾರದರ್ಶಕತೆ ಹೆಚ್ಚುವ ನಿರೀಕ್ಷೆಯೊಂದಿಗೆ ಅಭ್ಯರ್ಥಿಗಳ ವಿಶ್ವಾಸ ಹೆಚ್ಚುವ ಸಾಧ್ಯತೆ ಇದೆ.


ಕೃಷಿ ಸಚಿವರ ಅಧಿಕೃತ ಹೇಳಿಕೆ

ಈ ಕುರಿತು ರಾಜ್ಯ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯದ ಸಾವಿರಾರು ನಿರುದ್ಯೋಗಿ ಯುವಕರು ಮತ್ತು ಲಕ್ಷಾಂತರ ರೈತ ಕುಟುಂಬಗಳ ಆಶೋತ್ತರಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.

ಅಭ್ಯರ್ಥಿಗಳು ಬಹಳ ದಿನಗಳಿಂದ ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ವೇಗ ಹೆಚ್ಚಿಸಬೇಕೆಂದು ಮನವಿ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಹಿಂದಿನ ಆದೇಶವನ್ನು ರದ್ದುಪಡಿಸಿ, ಎಲ್ಲಾ ನೇಮಕಾತಿಗಳನ್ನು KEA ಮೂಲಕ ನಡೆಸಲು ಸರ್ಕಾರ ಅಧಿಕೃತ ಆದೇಶ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಕೃಷಿ ಇಲಾಖೆಯ ನೇಮಕಾತಿಗೆ ಸಿದ್ಧತೆ ನಡೆಸುತ್ತಿರುವ ಸಾವಿರಾರು ಅಭ್ಯರ್ಥಿಗಳು ಈ ಹಿಂದೆ ಹಲವು ಬಾರಿ ಸರ್ಕಾರದ ಗಮನ ಸೆಳೆದಿದ್ದರು. ಶೀಘ್ರವಾಗಿ ಪರೀಕ್ಷೆ ನಡೆಸುವುದು ಮತ್ತು ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಸಿಗುವುದು ಅವರ ಪ್ರಮುಖ ಬೇಡಿಕೆಯಾಗಿತ್ತು.

ಇದನ್ನು ಓದಿ : 2nd PUC Result ಗೆ ದೊಡ್ಡ ಶಾಕ್? ಮಾರ್ಚ್ 20 ರಿಂದ ಮೌಲ್ಯಮಾಪನ ಬಹಿಷ್ಕಾರಕ್ಕೆ ಉಪನ್ಯಾಸಕರ ನಿರ್ಧಾರ


ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚುವ ನಿರೀಕ್ಷೆ

ಈ ನಿರ್ಧಾರದ ಮುಖ್ಯ ಉದ್ದೇಶ ನೇಮಕಾತಿ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕವಾಗಿಸುವುದಾಗಿದೆ.

KEA ಈಗಾಗಲೇ ಹಲವು ಪ್ರಮುಖ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿರುವ ಅನುಭವ ಹೊಂದಿದೆ. ಅಷ್ಟೆ ಅಲ್ಲದೇ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲು ಮತ್ತು ಪರೀಕ್ಷಾ ಪ್ರಕ್ರಿಯೆ ಸುಗಮವಾಗಹಿಸುವ ಕಾರಣದಿಂದ ಕೃಷಿ ಇಲಾಖೆಯ ನೇಮಕಾತಿಯನ್ನು KEA ಮೂಲಕ ನಡೆಸಲು ಸರ್ಕಾರ ನಿರ್ಧರಿಸಿದೆ.

ಈ ನಿರ್ಧಾರದಿಂದ ವಿಶೇಷವಾಗಿ ಗ್ರಾಮೀಣ ಭಾಗದ ಯುವಕರಿಗೆ ಹೆಚ್ಚಿನ ಪ್ರಯೋಜನವಾಗುವ ಸಾಧ್ಯತೆ ಇದೆ.

ಕೃಷಿ ಹಿನ್ನೆಲೆಯುಳ್ಳ ಯುವಕರು ಸಾಮಾನ್ಯವಾಗಿ ಕೃಷಿ ಇಲಾಖೆಯ ಹುದ್ದೆಗಳಿಗಾಗಿ ಹೆಚ್ಚಿನ ಆಸಕ್ತಿ ತೋರಿಸುತ್ತಾರೆ. ಈ ಹುದ್ದೆಗಳು ಅವರ ಜೀವನದಲ್ಲಿ ಸ್ಥಿರ ಉದ್ಯೋಗ ಮತ್ತು ಉತ್ತಮ ಭವಿಷ್ಯ ನೀಡುವ ಸಾಧ್ಯತೆ ಹೊಂದಿವೆ.

ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿರುವುದರಿಂದ ಗ್ರಾಮೀಣ ಯುವಕರಿಗೆ ಯಾವುದೇ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುತ್ತದೆ ಎಂಬ ವಿಶ್ವಾಸ ವ್ಯಕ್ತವಾಗಿದೆ.

ಅಭ್ಯರ್ಥಿಗಳಿಗೆ ಶುಭಾಶಯ ತಿಳಿಸಿದ ಸಚಿವರು

ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಎಲ್ಲಾ ಅಭ್ಯರ್ಥಿಗಳಿಗೆ ಕೃಷಿ ಸಚಿವರು ಶುಭಾಶಯ ತಿಳಿಸಿದ್ದಾರೆ.

“ಪ್ರತಿಭಾವಂತ ಯುವಕರಿಗೆ ಯಾವುದೇ ಅನ್ಯಾಯವಾಗದಂತೆ ಸರ್ಕಾರ ಬದ್ಧವಾಗಿದೆ. ಅಭ್ಯರ್ಥಿಗಳು ತಮ್ಮ ಪರಿಶ್ರಮದ ಮೂಲಕ ಯಶಸ್ಸು ಸಾಧಿಸಬೇಕು ” ಎಂದು ಅವರು ಹೇಳಿದ್ದಾರೆ.

ಸರ್ಕಾರ ಸದಾ ಉದ್ಯೋಗಾಕಾಂಕ್ಷಿಗಳ ಬೆಂಬಲದಲ್ಲಿದ್ದು, ಅವರ ಭವಿಷ್ಯಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಅವರು ಭರವಸೆ ನೀಡಿದ್ದಾರೆ.