Sandhya Suraksha Yojana 2026 : ವಯಸ್ಸು ಹೆಚ್ಚಾದಂತೆ ಆರ್ಥಿಕ ಸಮಸ್ಯೆಗಳು ಎದುರಾಗುವುದು ಬಹುತೇಕ ಹಿರಿಯ ನಾಗರಿಕರ ಜೀವನದಲ್ಲಿ ಸಾಮಾನ್ಯ ಸಂಗತಿಯಾಗಿದೆ. ಉದ್ಯೋಗ ಅಥವಾ ಆದಾಯದ ಮೂಲ ಕಡಿಮೆಯಾಗಿರುವ ಕಾರಣ ದಿನನಿತ್ಯದ ಖರ್ಚುಗಳನ್ನು ನಿಭಾಯಿಸುವುದು ಕಷ್ಟವಾಗುತ್ತದೆ. ಇಂತಹ ಸಂದರ್ಭದಲ್ಲಿ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳು ಹಿರಿಯರಿಗೆ ದೊಡ್ಡ ನೆರವಾಗುತ್ತವೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಹಿರಿಯ ನಾಗರಿಕರ ಜೀವನಕ್ಕೆ ಆರ್ಥಿಕ ಭದ್ರತೆ ನೀಡುವ ಉದ್ದೇಶದಿಂದ ಸಂಧ್ಯಾ ಸುರಕ್ಷಾ ಯೋಜನೆ (Sandhya Suraksha Yojana) ಅನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ಅರ್ಹ ಹಿರಿಯ ನಾಗರಿಕರಿಗೆ ಪ್ರತಿ ತಿಂಗಳು ₹1200 ಪಿಂಚಣಿ ನೀಡಲಾಗುತ್ತದೆ. ಈ ಹಣವನ್ನು ಸರ್ಕಾರ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ .
ಈ ಯೋಜನೆಯ ಮುಖ್ಯ ಉದ್ದೇಶ ವಯಸ್ಸಾದ ನಂತರ ಆದಾಯವಿಲ್ಲದ ಅಥವಾ ಆರ್ಥಿಕವಾಗಿ ಹಿಂದುಳಿದ ಹಿರಿಯ ನಾಗರಿಕರಿಗೆ ಕನಿಷ್ಠ ಮಟ್ಟದ ಆರ್ಥಿಕ ನೆರವನ್ನು ಒದಗಿಸುವುದಾಗಿದೆ.
ಸಂಧ್ಯಾ ಸುರಕ್ಷಾ ಯೋಜನೆ :
ಸಂಧ್ಯಾ ಸುರಕ್ಷಾ ಯೋಜನೆ ಕರ್ನಾಟಕ ಸರ್ಕಾರದ ಪ್ರಮುಖ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಲ್ಲಿ ಒಂದಾಗಿದೆ. ರಾಜ್ಯದ ಆರ್ಥಿಕವಾಗಿ ಹಿಂದುಳಿದ ಹಿರಿಯ ನಾಗರಿಕರಿಗೆ ಮಾಸಿಕ ಪಿಂಚಣಿ ನೀಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಈ ಯೋಜನೆಯಡಿ ಸರ್ಕಾರದಿಂದ ನೀಡಲಾಗುವ ಹಣವನ್ನು Direct Benefit Transfer (DBT) ವ್ಯವಸ್ಥೆಯ ಮೂಲಕ ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ. ಇದರಿಂದ ಮಧ್ಯವರ್ತಿಗಳ ಸಮಸ್ಯೆ ಇಲ್ಲದೆ ಪಿಂಚಣಿ ಹಣವನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ.
ಇದರಿಂದ ಹಿರಿಯ ನಾಗರಿಕರು ತಮ್ಮ ದಿನನಿತ್ಯದ ಖರ್ಚುಗಳು, ಔಷಧಿ ವೆಚ್ಚ ಹಾಗೂ ಇತರ ಅಗತ್ಯಗಳನ್ನು ಪೂರೈಸಿಕೊಳ್ಳಲು ಸಹಾಯವಾಗುತ್ತದೆ.
ಅರ್ಜಿ ಸಲ್ಲಿಸುವವರ ಅರ್ಹತೆಗಳು
1️⃣ ಕನಿಷ್ಠ 65 ವರ್ಷ ಅಥವಾ ಅದಕ್ಕಿಂತ ಹೆಚ್ಚು ವಯಸ್ಸು ಹೊಂದಿರಬೇಕು.
2️⃣ ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
3️⃣ ಆರ್ಥಿಕವಾಗಿ ಹಿಂದುಳಿದ ಕುಟುಂಬಕ್ಕೆ ಸೇರಿದವರಿಗೆ ಅರ್ಹರಾಗಿರುತ್ತಾರೆ
4️⃣ ಇತರ ಸರ್ಕಾರಿ ಪಿಂಚಣಿ ಪಡೆಯುತ್ತಿರುವವರಿಗೆ ಅನ್ವಯವಾಗುವುದಿಲ್ಲ.
5️⃣ ಸರ್ಕಾರಿ ನೌಕರರು ಮತ್ತು ನಿವೃತ್ತ ಸರ್ಕಾರಿ ನೌಕರರು ಅರ್ಹರಾಗಿರುವುದಿಲ್ಲ.
ಈ ಎಲ್ಲ ಅರ್ಹತಾ ಮಾನದಂಡಗಳನ್ನು ಪೂರೈಸಿದ ಹಿರಿಯ ನಾಗರಿಕರು ಮಾತ್ರ ಸಂಧ್ಯಾ ಸುರಕ್ಷಾ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಧಾನ :
ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ತಮ್ಮ ಹತ್ತಿರದ ಗ್ರಾಮ ಲೆಕ್ಕಾಧಿಕಾರಿ (VAO) ಕಚೇರಿ ಅಥವಾ ನಾಡಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅಥವಾ ಗ್ರಾಮ ಒನ್ ಅಥವಾ ಕರ್ನಾಟಕ ಒನ್ ಸೇವಾ ಕೇಂದ್ರಗಳ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಇಲ್ಲಿ ಸಿಬ್ಬಂದಿ ಅರ್ಜಿದಾರರಿಗೆ ಸಂಪೂರ್ಣ ಸಹಾಯ ಮಾಡುತ್ತಾರೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು
ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ಅರ್ಜಿ ಸಲ್ಲಿಸುವವರು ನಾಡಕಚೇರಿ ಸೇವೆಗಳ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮೊಬೈಲ್ ಸಂಖ್ಯೆಯಿಂದ OTP ಮೂಲಕ ಲಾಗಿನ್ ಮಾಡಿ Online Application ವಿಭಾಗದಲ್ಲಿ Sandhya Suraksha Yojana ಆಯ್ಕೆ ಮಾಡಿ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿಅರ್ಜಿಯನ್ನು ಸಲ್ಲಿಸಿ ರಶೀದಿ ಪಡೆಯಬೇಕು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
-
ಆಧಾರ್ ಕಾರ್ಡ್
-
ರೇಷನ್ ಕಾರ್ಡ್
-
ಬ್ಯಾಂಕ್ ಪಾಸ್‌ಬುಕ್
-
ಆದಾಯ ಪ್ರಮಾಣ ಪತ್ರ
-
ಜಾತಿ ಪ್ರಮಾಣ ಪತ್ರ
-
ಪಾಸ್‌ಪೋರ್ಟ್ ಅಳತೆಯ ಫೋಟೋ
-
ಮೊಬೈಲ್ ಸಂಖ್ಯೆ
ಯೋಜನೆಯ ಪ್ರಮುಖ ಉದ್ದೇಶ
-
ಆರ್ಥಿಕವಾಗಿ ಹಿಂದುಳಿದ ಹಿರಿಯ ನಾಗರಿಕರಿಗೆ ಮಾಸಿಕ ಪಿಂಚಣಿ ನೀಡುವುದು
-
ವೃದ್ಧಾಪ್ಯದಲ್ಲಿ ಕನಿಷ್ಠ ಆರ್ಥಿಕ ಭದ್ರತೆ ಒದಗಿಸುವುದು
-
ಸಮಾಜದ ದುರ್ಬಲ ವರ್ಗಗಳಿಗೆ ಸಹಾಯ ಮಾಡುವುದು
-
ಹಿರಿಯ ನಾಗರಿಕರ ಜೀವನಮಟ್ಟವನ್ನು ಸುಧಾರಿಸುವುದು
ಅರ್ಜಿ ಪರಿಶೀಲಿಸುವ ವಿಧಾನ
ಅರ್ಜಿಯನ್ನು ಸಲ್ಲಿಸಿದ ನಂತರ ಅದರ ಸ್ಥಿತಿಯನ್ನು ತಿಳಿದುಕೊಳ್ಳಲು ನಾಡಕಚೇರಿ ಆನ್‌ಲೈನ್ ಸೇವೆಯ ಮೂಲಕ ತಿಳಿಯಬಹುದು, ಅದಕ್ಕೆ ಈ ಕ್ರಮಗಳನ್ನು ಅನುಸರಿಸಿ
ವಿಧಾನ ಕ್ರಮ : ನಾಡಕಚೇರಿ ಸೇವೆಗಳ ವೆಬ್‌ಸೈಟ್ ನಲ್ಲಿApplication Status ಆಯ್ಕೆಯನ್ನು ಕ್ಲಿಕ್ ಮಾಡಿ ನಿಮ್ಮ ಅರ್ಜಿಯ ಸಂಖ್ಯೆಯನ್ನು ನಿಡಬೇಕು. Submit ಮಾಡಿದ ನಂತರ ಅರ್ಜಿಯ ಪ್ರಗತಿ ಯಾವ ಹಂತದಲ್ಲಿದೆ ಎಂಬ ಮಾಹಿತಿ ತಿಳಿಯಬಹುದಾಗಿದೆ.
ಯೋಜನೆಯ ಮಹತ್ವ
ಸಂಧ್ಯಾ ಸುರಕ್ಷಾ ಯೋಜನೆ ಕೇವಲ ಪಿಂಚಣಿ ನೀಡುವ ಯೋಜನೆಯಷ್ಟೇ ಅಲ್ಲ. ಇದು ಹಿರಿಯ ನಾಗರಿಕರ ಜೀವನಕ್ಕೆ ಆರ್ಥಿಕ ಭದ್ರತೆ ನೀಡುವ ಮಹತ್ವದ ಯೋಜನೆಯಾಗಿದೆ. ವಯಸ್ಸಾದ ನಂತರ ಆದಾಯದ ಮೂಲ ಇಲ್ಲದಿದ್ದರೂ ಸರ್ಕಾರದಿಂದ ದೊರೆಯುವ ಮಾಸಿಕ ಪಿಂಚಣಿ ಅವರ ಜೀವನದಲ್ಲಿ ಸ್ವಲ್ಪ ಮಟ್ಟಿನ ಸ್ಥಿರತೆಯನ್ನು ತರಲು ಸಹಾಯ ಮಾಡುತ್ತದೆ.
ರಾಜ್ಯ ಸರ್ಕಾರವು ಸಾಮಾಜಿಕ ಭದ್ರತಾ ಯೋಜನೆಗಳನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ಇಂತಹ ಯೋಜನೆಗಳನ್ನು ನಿರಂತರವಾಗಿ ಜಾರಿಗೆ ತರುತ್ತಿದೆ. ಹೀಗಾಗಿ ನಿಮ್ಮ ಕುಟುಂಬದಲ್ಲಿ ಅಥವಾ ಪರಿಚಯದಲ್ಲಿ 65 ವರ್ಷ ಮೇಲ್ಪಟ್ಟ ಆರ್ಥಿಕವಾಗಿ ಹಿಂದುಳಿದ ಹಿರಿಯ ನಾಗರಿಕರು ಇದ್ದರೆ, ಅವರು ಈ ಯೋಜನೆಗೆ ಅರ್ಜಿ ಸಲ್ಲಿಸಿ ಸರ್ಕಾರದ ಈ ಸೌಲಭ್ಯವನ್ನು ಪಡೆಯಬಹುದು.
ಪ್ರಮುಖ ಪಿಂಚಣಿ ಯೋಜನೆಗಳು :
ಕರ್ನಾಟಕ ಸರ್ಕಾರವು ಸಾಮಾಜಿಕ ಭದ್ರತೆ ನೀಡುವ ಉದ್ದೇಶದಿಂದ ಹಲವು ಪಿಂಚಣಿ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಪ್ರಮುಖ ವಾದವುಗಳು:
-
ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಪಿಂಚಣಿ ಯೋಜನೆ
-
ವಿಧವಾ ಪಿಂಚಣಿ ಯೋಜನೆ
-
ಅಂಗವಿಕಲ ಪಿಂಚಣಿ ಯೋಜನೆ
-
ಸಂಧ್ಯಾ ಸುರಕ್ಷಾ ಯೋಜನೆ
ಈ ಯೋಜನೆಗಳು ಸಮಾಜದ ವಿವಿಧ ವರ್ಗಗಳಿಗೆ ಆರ್ಥಿಕ ನೆರವು ಒದಗಿಸುವ ಉದ್ದೇಶದಿಂದ ಜಾರಿಗೆ ತರಲಾಗಿದೆ.
ಇದನ್ನು ಓದಿ :
Senior Citizen Card : ಹಿರಿಯ ನಾಗರಿಕರಿಗೆ ಬಂಪರ್ ಲಾಭಗಳು !
